Jan 30: ದಿನಾಂಕ 26-01-2021ರಂದು ಸಂತ ಜೋಸೆಫರ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ, ಕಂಕನಾಡಿ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸೇರಿ ಗಣರಾಜ್ಯ ದಿನವನ್ನು ಆಚರಿಸಿದೆವು. ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಸಿಲ್ವಿಯಾ ಗೀತಾ ಡಿಸೋಜರವರು ಧ್ವಜಾರೋಹಣವನ್ನು ನೆರವೇರಿಸಿದರು. ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ವಿಧಿಯನ್ನು ನೆರವೇರಿಸಿ ಕೊಟ್ಟರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀಣಾ ಅರಾನ್ಹರವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು. ಗಣರಾಜ್ಯ ದಿನದ ಮಹತ್ವದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಷಣವನ್ನು ಮಾಡಿದರು. ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಎಲ್ಲರಿಗೂ ಗಣರಾಜ್ಯ ದಿನದ ಶುಭಾಶಯಗಳನ್ನು ಕೋರಿದರು. ನಂತರ ಪ್ರೌಢಶಾಲಾ ವಿದ್ಯಾರ್ಥಿನಿ ನೆರೆದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಸಿಹಿತಿಂಡಿ ವಿತರಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

 


 

 

ಸಿಲ್ವಿಯಾ ಗೀತಾ ಡಿಸೋಜ, ಮುಖ್ಯೋಪಾಧ್ಯಾಯಿನಿ
ಸಂತ ಜೋಸೆಫರ ಪ್ರೌಢಶಾಲೆ ಶಾಲೆ, ಕಂಕನಾಡಿ

 

 

 

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]