June 21: ದಿನಾಂಕ 15.04.2021ರಂದು ಬೆಥನಿ ಪ್ರೌಢ ಶಾಲೆ, ಚಿತ್ತಾಪೂರದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಜ್ಯೋತಿ ಸೇವಾ ಕೇಂದ್ರದಿಂದ ಶ್ರೀಯುತ ಆನಂದಕುಮಾರ ಮುಕ್ತೆದಾರ್‍ರವರು ವಿಶೇಷ ಉಪನ್ಯಾಸಕರಾಗಿ ಆಗಮಿಸಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಅವರು ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಮಾತನಾಡಿದರು.

ಸಾಂಕ್ರಾಮಿಕ ರೋಗಗಳು ಕೇವಲ ಒಬ್ಬ ವ್ಯಕ್ತಿಗೆ ಮಾತ್ರವಲ್ಲದೆ, ಇಡೀ ಸಮುದಾಯವನ್ನೇ ಪೀಡಿಸಬಲ್ಲದಾಗಿರುತ್ತವೆ. ಹಾಗಾಗಿ ಅವುಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಆರಂಭ ಹಂತದಲ್ಲ್ ಅವುಗಳನ್ನು ಪತ್ತೆ ಮಾಡುವುದರಿಂದ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರಿಂದ, ಪೌಷ್ಟಿಕ ಆಹಾರ ಮತ್ತು ನೈರ್ಮಲ್ಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರದಲ್ಲಿಡಬಹುದು ಎಂಬ ಉಪಯುಕ್ತ ಮಾಹಿತಿಯನ್ನು ನೀಡಿದರು. ಜೊತೆಗೆ ಸೃಜನಾತ್ಮಕವಾಗಿ ಕೋರೊನಾದ ಎಚ್ಚರಿಕೆಯ ಕ್ರಮಗಳನ್ನು ಹಾಡಿನ ಮೂಲಕ ಹಾಡಿ ಮಕ್ಕಳಲ್ಲಿ ಅರಿವು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಬೆಥನಿ ಪ್ರೌಢ ಶಾಲೆಯ ಮುಖ್ಯ ಗುರುಗಳು ಹಾಗೂ ಶ್ರೀಯುತ ಸಾಬಣ್ಣ, ಶ್ರೀಯುತ ರುದ್ರಪ್ಪ ಹಾಗೂ ಶಾಲೆಯ ಎಲ್ಲ ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದರು. ಈ ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಶ್ರೀಯುತ ವಿಶ್ವನಾಥ ಕುಂಬಾರವರು ನೆರವೇರಿಸಿ ಕೊಟ್ಟರು.

 

 

 

 

ಶ್ರೀಯುತ ಶೇಷಪ್ಪ, ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

 

 

 

 

 

 

 

 

 

 

 

 

 

 

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]