Aug 09: ದಿನಾಂಕ 09.08.2017 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶಿವಶರಣಪ್ಪ ಬನ್ನಿಕಟ್ಟಿರವರು ನಮ್ಮ ಶಾಲೆಗೆ ಭೇಟಿ ನೀಡಿದರು. ಶಾಲೆಯ ಹಲವು ದಾಖಲೆಗಳನ್ನು ಪರೀಶೀಲಿಸಿ, ಎಲ್ಲಾ ತರಗತಿಗಳಿಗೆ ಭೇಟಿ ನೀಡಿದರು. ಇಲ್ಲಿÀಯ ಆಡಳಿತ ರೀತಿ ಶಾಲಾ ಶಿಸ್ತು, ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಬಗ್ಗೆ ತುಂಬಾ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಶಿಕ್ಷಕರ ಸಭೆಯನ್ನು ಕರೆದು ಇದೇ ರೀತಿಯಾಗಿ ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಂತೆ ಪ್ರೋತ್ಸಾಹಿಸಿದರು.

11.08.2017 ರಂದು ಸ್ಥಳೀಯ ಶ್ರೀ ಕೋರಿಸಿದ್ದೇಶ್ವರ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಂತರಶಾಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ನಮ್ಮ ಶಾಲೆಯ ವಿದ್ಯಾರ್ಥಿಗಳು ಕೂಡಾ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ದೇಶಭಕ್ತಿ ಗೀತೆಯಲ್ಲಿ ಭೂಮಿಕಾ ಪ್ರಥಮ ಬಹುಮಾನವನ್ನು, ಹಾಗೂ ಆದರ್ಶ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು, ಪಡೆದುಕೊಂಡರು.   

Sr Kavitha BS, Headmistress
Bethany High School, Chittapur

 

 

 

 

 

Home | About | NewsSitemap | Contact Us

Copyright © 2016-2024 - www.besmangalore.org . Powered by eCreators

Contact us

Bethany Educational Society®
Bethany Convent
Bendur, Mangalore-575002
D.K. Dist, Karnataka State

E-mail : [email protected]