Aug 15:ನಮ್ಮ ಶಾಲೆಯಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿಯರಾದ ಸಿಸ್ಟರ್ ಕವಿತಾರವರು ಧ್ವಜಾರೋಹಣವನ್ನು ನೇರವೆರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಂದನಿಯ ಫಾದರ್À ಜಾರ್ಜ ಲೊಬೊ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯಿನಿ ಸಿಸ್ಟರ್ ಲೂಸಿ ಕ್ಲೇರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಿದರು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೈಹಿಕ ಶಿಕ್ಷಕರಾದ ಶ್ರೀ ವಿಶ್ವನಾಥರವರು ಕಾರ್ಯಕ್ರಮವನ್ನು ನೆರವೇರಿಸಿದರು.

71ನೇಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಸೀಲ ಕಾರ್ಯಲಯದಲ್ಲಿ, ದೇಶಭಕ್ತಿ ಮೂಡಿಸುವ ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Sr Kavitha BS, Headmistress
Bethany High School, Chittapur

 

 

 

 

 

 

Home | About | NewsSitemap | Contact Us

Copyright © 2016-2024 - www.besmangalore.org . Powered by eCreators

Contact us

Bethany Educational Society®
Bethany Convent
Bendur, Mangalore-575002
D.K. Dist, Karnataka State

E-mail : [email protected]