Sep 05:  ದಿನಾಂಕ 05.09.2017 ರಂದು ನಮ್ಮ ಶಾಲೆಯಲ್ಲಿ ಆದರ್ಶ ಶಿಕ್ಷಕ, ದಾರ್ಶನಿಕ, ತತ್ವಜ್ಞಾನಿಯಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಂದನೀಯ ಫಾ.ಜಾರ್ಜ ಲೋಬೊ ಆಗಮಿಸಿದ್ದರು. ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯೊಂದಿಗೆ ಆರಂಭಿಸಲಾಯಿತು. ಅತಿಥಿಗಳು, ಎಲ್ಲ ಶಿಕ್ಷಕರು ರಾಧಾಕೃಷ್ಣನರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವವನ್ನು ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಫಾ.ಜಾರ್ಜ ಲೋಬೊ ಅವರು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಹಾಗೂ ವಿದ್ಯಾರ್ಥಿಗಳಲ್ಲಿ ಶಿಕ್ಷಣವು ಶಿಸ್ತು, ಮಾನವೀಯ ಮೌಲ್ಯಗಳು, ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತದೆ, ವಿದ್ಯಾರ್ಥಿಗಳು ಶಿಕ್ಷಕರನ್ನು ಅತ್ಯಂತ ಗೌರವದಿಂದ ಕಾಣಬೇಕು, ಏಕೆಂದರೆ ದೇವರು ನಮ್ಮನ್ನು ಸೃಷ್ಟಿ ಮಾಡಿದ್ದಾನೆ. ನಮ್ಮನ್ನು ಪರಿಪೂರ್ಣರನ್ನಾಗಿ ಮಾಡುವವರು ಶಿಕ್ಷಕರು ಎಂದು ತಿಳಿಸಿದರು. ನಂತರ ವಿದ್ಯಾರ್ಥಿಗಳು ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರನ್ನು ಸಂತೋಷ ಪಡಿಸಿದರು. ಶಿಕ್ಷಕರಿಗಾಗಿ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳು ಅತ್ಯಂತ ಸುಂದರವಾಗಿ ಅಚ್ಚಕಟ್ಟಾಗಿ ಅರ್ಥಪೂರ್ಣವಾಗಿ ನೆರವೇರಿಸಿದರು.

Sr Kavitha BS, Headmistress
Bethany HS, Chittapur

 

 

 

Home | About | NewsSitemap | Contact Us

Copyright © 2016-2024 - www.besmangalore.org . Powered by eCreators

Contact us

Bethany Educational Society®
Bethany Convent
Bendur, Mangalore-575002
D.K. Dist, Karnataka State

E-mail : [email protected]