June 28: ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ 2018-19ನೇ ಸಾಲಿನ ಶಾಲಾ ಮಂತ್ರಿ ಮಂಡಲವನ್ನು ದಿನಾಂಕ: 28.06.2018 ರಂದು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಗುಪ್ತ ಮತದಾನ ಮಾಡುವುದರ ಮೂಲಕ ಶಾಲಾ ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿಯನ್ನು ಚುನಾಯಿಸಿದರು. ಈ ಮಂತ್ರಿಮಂಡಲವನ್ನು ಉದ್ದೇಶಿಸಿ ಶಾಲಾ ಮುಖ್ಯೋಪಾಧ್ಯಾಯಿನಿಯರಾದ ಸಿ.ಕವಿತಾ ಬಿ.ಎಸ್ ಅವರು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಹಾಗೂ ಶಾಲೆಯ ಉತ್ತಮ ಆಡಳಿತ ನಡೆಸಲು ಮಂತ್ರಿ ಮಂಡಲದ ಅವಶ್ಯಕತೆ ಇದೆ ಮತ್ತು ನಾಯಕನಲ್ಲಿರಬೇಕಾದ ಗುಣಲಕ್ಷಣಗಳ ಬಗ್ಗೆ, ಅವರ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.   ನೂತನವಾಗಿ ಆಯ್ಕೆಯಾದ ಮಂತ್ರಿಮಂಡಲದ ಸದಸ್ಯರಿಗೆ ದೈಹಿಕ ಶಿಕ್ಷಕರಾದ ಶ್ರೀಯುತ ವಿಶ್ವನಾಥ ಕುಂಬಾರರವರು ಪ್ರಮಾಣ ವಚನ ಬೋಧಿಸಿದರು.

 

 

 

 

ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

Comments powered by CComment

Home | About | NewsSitemap | Contact Us

Copyright © 2016-2024 - www.besmangalore.org . Powered by eCreators

Contact us

Bethany Educational Society®
Bethany Convent
Bendur, Mangalore-575002
D.K. Dist, Karnataka State

E-mail : [email protected]