Aug 18: ಬೆಥನಿ ಪ್ರೌಢ ಶಾಲೆ ಹಾಗೂ ಶಿಶುವಿಹಾರ ಪ್ರಾಥಮಿಕ ಶಾಲೆ ಸಂಯುಕ್ತವಾಗಿ 72ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಗಿಯಾಗಿರುವ ಸಿ. ಸೆಲಿನ್ ಹಾಗೂ ವಂ. ಫಾದರ ಜಾರ್ಜ ಲೋಬೋರವರು ಆಗಮಿಸಿದ್ದರು. ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಸಿ. ಸೆಲಿನ್‍ರವರು ಅರ್ಪಣೆ ಮಾಡಿ ಗೌರವ ಸಲ್ಲಿಸಿದರು. ಫಾ. ಜಾರ್ಜ ಲೋಬೋರವರು ಧ್ವಜಾರೋಹಣವನ್ನು ನೆರವೇರಿಸಿದರು. ವೇದಿಕೆಯ ಮೇಲೆ ಮುಖ್ಯೋಪಾಧ್ಯಾಯಿನಿಯರಾದ ಸಿ. ಕವಿತಾ ಲೋಬೋ, ಸಿ. ಲೂಸಿ ಕ್ಲೇರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಫಾ. ಜಾರ್ಜ ಲೋಬೋರವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸಿಕೊಳ್ಳಬೇಕೆಂದು ಹೇಳಿದರು. ಇದೇ ಕಾರ್ಯಕ್ರಮದಲ್ಲಿ “ಹಸಿರು ಕರ್ನಾಟಕ ಅಂದೋಲನ” ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಅತಿಥಿ ಗಣ್ಯರು ಎಲ್ಲಾ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

 

 

ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ
ಬೆಥನಿ ಪ್ರೌಢ ಶಾಲೆ, ಚಿತ್ತಾಪುರ

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]