Nov 23: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ದಿನಾಂಕ 05.11.2022 ರಂದು ಬೆಥನಿ ಶಿಕ್ಷಣ ಮಂಡಳಿಯ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಾಕ್ಷರಾದ ಶ್ರೀಮಾನ್ ರಘುನಾಥ ರೈ, ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷರಾದ ಶ್ರೀಮಾನ್ ರಾಮಚಂದ್ರ ಭಟ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸತೀಶ್, ಪ್ರಿಯಾ, ಮಮತ ಹಿರಿಯ ವಿದ್ಯಾರ್ಥಿಗಳಾದ ಸಂದೇಶ್, ರಮೇಶ್ ಕೆ ವಿ, ನಿವೃತ್ತ ಶಿಕ್ಷಕರಾದ ಡೋರತಿ ಮೇರಿ ಡಿಸೋಜ, ಜೋಸೆಫ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ವೆನಿಶಾ ಬಿ ಎಸ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರಾದ ಬಾಲಕೃಷ್ಣ ಪೆÇರ್ದಾಳ್ ಪ್ರಸ್ತಾವಿಕ ಭಾಷಣ ಮೂಲಕ ಬೆಥನಿ ಶಿಕ್ಷಣ ಮಂಡಳಿ ನಡೆದು ಬಂದ ದಾರಿಯ ಬಗ್ಗೆ ಸವಿಸ್ತಾರವಾಗಿ ತಿಳಿಯಪಡಿಸಿದರು. ಅದನ್ನು ನೃತ್ಯದ ಮೂಲಕ ಪ್ರಸ್ತುತ ಪಡಿಸಿದರು. ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಇವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಅಮೃತ ಮಹೋತ್ಸವದ ಉದ್ಘಾಟನೆ ಮಾಡಿ ಸಂದೇಶವನ್ನು ನೀಡಿದರು.

ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶಾಲೆಯ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ನೀಡಿದ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಘುನಾಥ ರೈ, ಹಾಗೂ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ರಾಮಚಂದ್ರ ಭಟ್ ನಿವೃತ್ತ ಶಿಕ್ಷಕರಾದ ಡೋರತಿ ಮೇರಿ ಡಿಸೋಜ, ಜೋಸೆಫ್ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕಿಯಾದ ರಿಶ್ವಿತಾ ಕಾರ್ಯ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ವೆನಿಶಾ ಬಿ ಎಸ್ ಸ್ವಾಗತಿಸಿ, ಶಿಕ್ಷಕಿ ಮಮತಾ ವಂದಿಸಿದರು.

 

 

 

 

ಸಿಸ್ಟರ್ ವೆನಿಶಾ ಬಿ.ಎಸ್, ಮುಖ್ಯೋಪಾಧ್ಯಾಯಿನಿ
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು