ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ಶಿಕ್ಷಣದ ಪ್ರಮುಖ ಗುರಿ. ಈ ನಿಟ್ಟಿನಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಅಯೋಜಿಸುತ್ತಿದೆ. ಅದರಂತೆ ಪ್ರತಿ ವರ್ಷವೂ ಡ್ರಾಯಿಂಗ್ ಗ್ರೇಡ್ ಪರೀಕ್ಷೆ ನಡಸುತ್ತಿರುವುದು ಹೆಮ್ಮೆಯ ವಿಷಯ. 2019-20ನೇ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಬೆಥನಿ ಪ್ರೌಢ ಶಾಲೆ ಚಿತ್ತಾಪುರ ಇಲ್ಲಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ 20 ವಿದ್ಯಾರ್ಥಿಗಳು ಭಾಗವಹಿಸಿ ಅದರಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಉಳಿದ 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಇದು ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ವೃಂದಕ್ಕೆ ಹರ್ಷೋಲ್ಲಾಸವನ್ನು ತಂದುಕೊಟ್ಟಿದೆ.

ಶ್ರೀಮತಿ ಅರ್ಚನಾ, ಸಹ ಶಿಕ್ಷಕಿ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ